ದೇವನೂರ ಮಹಾದೇವರಿಗೆ ಶಿವರಾಮ ಕಾರಂತ ಪ್ರಶಸ್ತಿ


ಮಂಗಳೂರು: ಮೂಡುಬಿದಿರೆಯ ಶಿವರಾಮ ಕಾರಂತ ಪ್ರತಿಷ್ಠಾನವು ಕೊಡಮಾಡುವ ಶಿವರಾಮ ಕಾರಂತ ಪ್ರಶಸ್ತಿಗೆ ಲೇಖಕ ದೇವನೂರ ಮಹಾದೇವ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯ 15 ಸಾವಿರ ಗೌರವ ಸಂಭಾವನೆ, ಪ್ರಶಸ್ತಿ ಪತ್ರಗಳನ್ನು ಒಳಗೊಂಡಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಕೆ. ಅಮರನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಡಾ. ಜಯಪ್ರಕಾಶ ಮಾವಿನಕುಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.